ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಆಧಾರ್ ಸೇವಾ ಕೇಂದ್ರಗಳಲ್ಲಿ ಖಾಲಿ ಇರುವ 282 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 282 ಸೂಪರ್ ವೈಸರ್ ಅಥವಾ ಆಪರೇಟರ್ ಹುದ್ದೆಗಳನ್ನು ಭರ್ತಿ (Aadhaar Seva Center Recruitment 2026) ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಆಧಾರ್ ಸೇವಾ ಕೇಂದ್ರ
ಹುದ್ದೆ ಹೆಸರು: ಸೂಪರ್ ವೈಸರ್ ಅಥವಾ ಆಪರೇಟರ್
ಒಟ್ಟು ಹುದ್ದೆ: 282
ಉದ್ಯೋಗ ಸ್ಥಳ: ಕರ್ನಾಟಕ ಸೇರಿ ದೇಶಾದ್ಯಂತ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜನವರಿ 31
ಆಂಧ್ರಪ್ರದೇಶ, ಬಿಹಾರ, ಲಡಾಖ್, ಕೇರಳ, ಮಹಾರಾಷ್ಟ್ರ ಸೇರಿ ಹಲವು ರಾಜ್ಯಗಳಲ್ಲಿ ನೇಮಕಾತಿ ನಡೆಯುತ್ತಿದೆ. ಕರ್ನಾಟಕದಲ್ಲೂ 10 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ ಹಾಗೂ ಡಿಪ್ಲೋಮಾ ಕೋರ್ಸ್ ಪೂರ್ಣಗೊಳಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳ ಸಂದರ್ಶನ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ cscspv.in ಗೆ ಭೇಟಿ ನೀಡಬೇಕು.
ಸೂಪರ್ ವೈಸರ್ ಅಥವಾ ಆಪರೇಟರ್ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ: ಕೇಂದ್ರ ಸರ್ಕಾರದ DRDOದಲ್ಲಿ 10 ಹುದ್ದೆಗಳ ನೇಮಕಾತಿ | ಬೆಂಗಳೂರಿನಲ್ಲೇ ಕೆಲಸ


















