ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ (AAI Junior Executive Recruitment 2025) ಖಾಲಿ ಇರುವ 976 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 976 ಹುದ್ದೆಗಳು ಖಾಲಿ ಇದ್ದು, ಸೆಪ್ಟೆಂಬರ್ 27 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಹುದ್ದೆಯನ್ನು ಗಿಟ್ಟಿಸಿಕೊಳ್ಳಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI)
ಹುದ್ದೆಗಳ ಹೆಸರು: ಜೂನಿಯರ್ ಎಕ್ಸಿಕ್ಯೂಟಿವ್
ಒಟ್ಟು ಹುದ್ದೆಗಳು: 976
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 27
ಆಸಕ್ತಿ ಇರುವ ಅಭ್ಯರ್ಥಿಗಳು ಆಗಸ್ಟ್ 28ರ ನಂತರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಜೂನಿಯರ್ ಎಕ್ಸಿಕ್ಯೂಟಿವ್ (ಆರ್ಕಿಟೆಕ್ಚರ್), ಜೂನಿಯರ್ ಎಕ್ಸಿಕ್ಯೂಟಿವ್ (ಸಿವಿಲ್), ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಿಕಲ್ ಎಂಜಿನಿಯರಿಂಗ್), ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಾನಿಕ್ಸ್) ವಿಭಾಗದಲ್ಲಿ ಹುದ್ದೆಗಳು ಖಾಲಿ ಇವೆ. ನೇಮಕಾತಿ ಹೊಂದಿದವರಿಗೆ ಮಾಸಿಕ 40 ಸಾವಿರ ರೂಪಾಯಿಯಿಂದ 1.4 ಲಕ್ಷ ರೂಪಾಯಿವರೆಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಸಂಬಳ ನೀಡಲಾಗುತ್ತದೆ.
ಬಿ.ಇ, ಬಿ.ಟೆಕ್, ಎಂಸಿಎ, ಬ್ಯಾಚಲರ್ ಆಫ್ ಆರ್ಕಿಟೆಕ್ಚರ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಗರಿಷ್ಠ 27 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ, ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ, ಮಹಿಳೆಯರಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದವರಿಗೆ 300 ರೂಪಾಯಿ ಅರ್ಜಿ ಶುಲ್ಕವಿದೆ. ಆಸಕ್ತ ಅಭ್ಯರ್ಥಿಗಳು https://aai.aero/ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.