ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಖಾಲಿ ಇರುವ 14 ಹುದ್ದೆಗಳ ನೇಮಕಾತಿಗಾಗಿ (AAI Non Executives Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಸೀನಿಯರ್ ಅಸಿಸ್ಟಂಟ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI)
ಹುದ್ದೆ ಹೆಸರು: ಸೀನಿಯರ್ ಅಸಿಸ್ಟಂಟ್ ಇತ್ಯಾದಿ
ಒಟ್ಟು ಹುದ್ದೆ: 14
ಉದ್ಯೋಗ ಸ್ಥಳ: ದೇಶಾದ್ಯಂತ
ಸಂದರ್ಶನದ ದಿನಾಂಕ: 2026ರ ಜನವರಿ 11
ಸೀನಿಯರ್ ಅಸಿಸ್ಟಂಟ್ ಹಾಗೂ ಜೂನಿಯರ್ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೋಮಾ ಎಂಜಿನಿಯರಿಂಗ್ ಕೋರ್ಸ್ ಗಳನ್ನು ಮುಗಿಸಿದವರು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಸಂದರ್ಶನಕ್ಕೆ ಹಾಜರಾಗುವವರಿಗೆ ಕನಿಷ್ಠ 18ರಿಂದ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.1 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಜನರಲ್, ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಜನರಲ್, ಇಡಬ್ಲ್ಯೂಎಸ್, ಒಬಿಸಿಯವರಿಗೆ 1 ಸಾವಿರ ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಉಳಿದವರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಲಿಖಿತ ಪರೀಕ್ಷೆ, ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು https://aai.aero/ಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: ಇಂಡೋನೇಷ್ಯಾದಲ್ಲಿ ಭಾರೀ ಅಗ್ನಿ ದುರಂತ | 20 ಮಂದಿ ಸಜೀವ ದಹನ



















