ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ (AAI Junior Executive Recruitment 2025) ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಡ್ವೈಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI)
ಹುದ್ದೆಗಳ ಹೆಸರು: ಅಡ್ವೈಸರ್
ಒಟ್ಟು ಹುದ್ದೆಗಳು: 03
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 5
ನವದೆಹಲಿ ಹಾಗೂ ಗುಜರಾತ್ ನ ರಾಜ್ ಕೋಟ್ ನಲ್ಲಿ ಕಾರ್ಯನಿರ್ವಹಿಸಲು ಸಿದ್ಧರಿರುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಗರಿಷ್ಠ 65 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ವಿದ್ಯಾರ್ಹತೆ, ಅನುಭವ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 40 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಇದರ ಜತೆಗೆ ಟಿಎ, ಡಿಎ, ಮೊಬೈಲ್ ರಿಚಾರ್ಜ್ ಗೆ ಭತ್ಯೆ ಸೇರಿ ಹಲವು ಭತ್ಯೆಗಳನ್ನು ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು https://aai.aero/ ವೆಬ್ ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಳ್ಳಬೇಕು. ಬಳಿಕ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ chqrectt@aai.aero ವಿಳಾಸಕ್ಕೆ ಮೇಲ್ ಮಾಡಬೇಕು. ಅರ್ಜಿ ಸಲ್ಲಿಸುವವರಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.
ಇದನ್ನೂ ಓದಿ: ರೈತರ ಖಾತೆಗೆ 2 ಸಾವಿರ ರೂ. ಜಮೆ ಯಾವಾಗ? ಇಲ್ಲಿದೆ ಹೊಸ ಮಾಹಿತಿ



















