ಬೆಂಗಳೂರು: ನೀವು ಪದವಿ, ಸ್ನಾತಕೋತ್ತರ ಪದವಿ ಮುಗಿಸಿ ಕೇಂದ್ರ ಸರ್ಕಾರದ ಹುದ್ದೆಗಳಿಗಾಗಿ ಕಾಯುತ್ತಿದ್ದೀರಾ? ಹಾಗಾದರೆ ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ (AAI Recruitment 2026) ಅರ್ಜಿಗಳನ್ನು ಆಹ್ವಾನಿಸಲಾಗಿದೆ. 3 ಸಲಹೆಗಾರರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ಇಲ್ಲಿದೆ.
ನೇಮಕಾತಿ ಸಂಸ್ಥೆ: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI)
ಒಟ್ಟು ಹುದ್ದೆಗಳು: 3
ಉದ್ಯೋಗ ಸ್ಥಳ: ನವದೆಹಲಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಅಡ್ವೈಸರ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 6
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 65 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 40 ಸಾವಿರ ರೂ. ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ aai.aero ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಗಳನ್ನು ದಾಖಲೆಗಳೊಂದಿಗೆ chqrectt@aai.aero ಗೆ ಮೇಲ್ ಮಾಡಬೇಕು
ಇದನ್ನೂ ಓದಿ: ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ 11 ಹುದ್ದೆಗಳ ನೇಮಕ : ITI ಮುಗಿಸಿದವರಿಗೆ ಚಾನ್ಸ್



















