ಬೆಂಗಳೂರು : ಕೇಂದ್ರ ಸರ್ಕಾರದ ಉದ್ಯೋಗ ಪಡೆಯಲು ಸಿದ್ಧತೆ ನಡೆಸುತ್ತಿರುವವರಿಗೆ ಒಳ್ಳೆಯ ಅವಕಾಶ ದೊರೆತಿದೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಖಾಲಿ ಇರುವ 18 ಹುದ್ದೆಗಳ ನೇಮಕಾತಿಗಾಗಿ (AAI Recruitment 2026) ಅಧಿಸೂಚನೆ ಹೊರಡಿಸಲಾಗಿದೆ. 18 ಕನ್ಸಲ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ
ಹುದ್ದೆಗಳ ಹೆಸರು: ಕನ್ಸಲ್ಟಂಟ್
ಒಟ್ಟು ಹುದ್ದೆಗಳು: 18
ಉದ್ಯೋಗ ಸ್ಥಳ: ಚೆನ್ನೈ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 10
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಬಿ.ಇ, ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ತಮಿಳುನಾಡಿನ ಚೆನ್ನೈನಲ್ಲಿ ಕೆಲಸ ಮಾಡಲು ಸಿದ್ಧರಿರುವವರು ಅರ್ಜಿಗಳನ್ನು ಸಲ್ಲಿಸಬಹುದು. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 70 ಸಾವಿರ ರೂಪಾಯಿಯಿಂದ 1.5 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ aai.aero ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಿ, ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು.
ಇದನ್ನೂ ಓದಿ:ಖಾಸಗಿ ನೌಕರರಿಗೆ ನಿವೃತ್ತಿ ಬಳಿಕ 7,500 ರೂಪಾಯಿ ಪಿಂಚಣಿ: EPFO ಸಭೆಯ ಅಜೆಂಡಾ ಏನು?



















