ಬೆಂಗಳೂರು : ಬಿಜೆಪಿ ಜಾಹೀರಾತಿನ ವಿರುದ್ಧ ಆಮ್ ಆದ್ಮಿ ಪಕ್ಷದಿಂದ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ. ಬಿಜೆಪಿ ಪ್ರಕಟಿಸಿದ ಜಾಹೀರಾತು ಅಹಿಂಸಾ ತತ್ವಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿ, ಆಮ್ ಆದ್ಮಿ ಪಕ್ಷದ ವತಿಯಿಂದ ಎನ್‌ಸಿಆರ್ ದಾಖಲಾಗಿದೆ.

ಮಹಾತ್ಮ ಗಾಂಧೀಜಿಯವರು ಅಹಿಂಸಾವಾದಿಯಾಗಿದ್ದು, ಅವರನ್ನು ಮೂವರು ವ್ಯಕ್ತಿಗಳ ಮೇಲೆ ಹಲ್ಲೆಗೆ ಯತ್ನಿಸುವಂತೆ ಜಾಹೀರಾತಿನ ಫೋಟೋದಲ್ಲಿ ಚಿತ್ರಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದು ಮಹಾತ್ಮ ಗಾಂಧೀಜಿಯವರ ಜೀವನ ಮೌಲ್ಯಗಳು ಮತ್ತು ತತ್ವಗಳಿಗೆ ವಿರುದ್ಧವಾಗಿದ್ದು, ಉದ್ದೇಶಪೂರ್ವಕವಾಗಿ ಅವಮಾನಿಸುವ ರೀತಿಯಲ್ಲಿ ಜಾಹೀರಾತು ರೂಪಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ. ಈ ಕುರಿತು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಿಸಿಕೊಂಡು ಪರಿಶೀಲನೆ ನಡೆಸಲಾಗುತ್ತಿದೆ.
ಇದನ್ನೂ ಓದಿ : ಮಾದಕ ವಸ್ತು, ಮಾನವ ಕಳ್ಳಸಾಗಣೆ ಆರೋಪ | ಕ್ರಮಕ್ಕೆ ಪೊಲೀಸ್ ಆಯುಕ್ತರಿಗೆ ದಿನೇಶ್ ಕಲ್ಲಹಳ್ಳಿ ಮನವಿ



















