ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಅಬ್ರಾಹಂ ಮಂಗಳವಾರ ಮತ್ತೆ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ.
ಥಾವರ್ ಚೆಂದ್ ಗೆಹ್ಲೋಟ್ ಬೆಂಗಳೂರಿಗೆ ಮರಳಿದ ಹಿನ್ನೆಲೆಯಲ್ಲಿ ಅಬ್ರಾಹಂ ಭೇಟಿ ಮಾಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ನೀಡಿದ್ದಾರೆ ಎನ್ನಲಾಗಿದೆ. ಈ ವೇಳೆ ಮಾತನಾಡಿದ ಅವರು, ನನ್ನ ಹತ್ತಿರ ಮತ್ತಷ್ಟು ಕ್ಲಾರಿಪಿಕೇಷನ್ ಕೇಳಿದ್ದಾರೆ. ಕಳೆದ ಬಾರಿ ಕೇಳಿದ ದಾಖಲೆಗಳ ಕುರಿತು ಮತ್ತೆ ಮಾತನಾಡಿದ್ದೇನೆ. ಹೀಗಾಗಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿಯನ್ನು ಕೊಡುವುದು ಶತಸಿದ್ಧ ಎಂದು ಹೇಳಿದ್ದಾರೆ.
ನಾನು ಹಾಕಿದ ಪ್ರಾಸಿಕ್ಯೂಷನ್ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದರು. ಆದರೆ, ಸಂಪುಟ ಸಭೆ ನಡೆಸಿ, ರಾಜ್ಯಪಾಲರು ನೋಟಿಸ್ ನೀಡಿದ್ದು ತಪ್ಪು ಅಂದಿದ್ದಾರೆ. ಟಿ.ಜೆ. ಅಬ್ರಾಹಂ ಕೂಡ ಸರಿಯಿಲ್ಲ ಅಂತಾರೆ. ಆದರೆ, ಸಿದ್ದರಾಮಯ್ಯ ಮೇಲೆ ಆರೋಪ ಸರಿಯಿದೆಯೇ? ಎಂದು ಪ್ರಶ್ನಿಸಿದ್ದಾರೆ.
ನಾನು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ವಿವರಣೆ ನೀಡಿದ್ದೇನೆ. ಇವತ್ತು ದಾಖಲೆ ನೀಡಿಲ್ಲ. ನನ್ನ ಮೇಲೆ ಸರ್ಕಾರ ಮಾಡಿರುವ ಆಪಾದನೆಗೆ ರಾಜ್ಯಪಾಲರ ಹತ್ತಿರ ಸ್ಪಷ್ಟನೆ ನೀಡಿದ್ದೇನೆ ಎಂದುಹೇಳಿದ್ದಾರೆ.