ಕೊಡಗು: ಕರ್ತವ್ಯ ನಿರತ ಪೋಲಿಸ್ ಸಿಬ್ಬಂದಿಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
ಕೊಡಗು ಜಿಲ್ಲೆಯ ಗೋಣಿಕೊಪ್ಪದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಈ ಕುರಿತ ವಿಡಿಯೋವೊಂದು ವೈರಲ್ ಆಗಿದೆ. ವೈರಲ್ ಆದ ವಿಡಿಯೋದಲ್ಲಿ ಗೋಣಿಕೊಪ್ಪ ಪೋಲಿಸ್ ಠಾಣಾ ಸಿಬ್ಬಂದಿ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ಕಾಣಬಹುದು. ವಿರಾಜಪೇಟೆ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಅಂಕತ್ ಪೊನ್ನಪ್ಪ ಎಂಬಾತ ನಿಂದಿಸಿದ್ದಾನೆ ಎನ್ನಲಾಗಿದೆ.
ರಸ್ತೆ ಬದಿ ನಿಲ್ಲಿಸಿದ್ದ ಕಾರನ್ನು ಸೈಡ್ ನಿಲ್ಲಿಸಿ ಎಂದು ಹೇಳಿದ್ದಕ್ಕೆ 112 ವಾಹನ ಸಿಬ್ಬಂದಿ ಜೊತೆ ಗಲಾಟೆ ಮಾಡಿದ್ದಾರೆ. ಈ ವೇಳೆ ಅಪ್ಪ- ಮಗ ಸೇರಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ನಡು ರಸ್ತೆಯಲ್ಲಿ ಸಾರ್ವಜನಿಕರ ಎದುರೇ ನಿಂದಿಸಿದ್ದಾರೆ.
ಪೊನ್ನಪ್ಪ ಮತ್ತು ಅಪ್ಪಣ ಪೊಲೀಸರಿಗೆ ನಿಂದಿಸಿರುವ ಆರೋಪಿಗಳು ಎನ್ನಲಾಗಿದೆ. ವಿಡಿಯೋ ಮಾಡುತ್ತಿದ್ದ ಪೋಲಿಸ್ ರ ಮೊಬೈಲ್ ನ್ನು ಕೂಡ ಆರೋಪಿಗಳು ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಪೊಲೀಸರನ್ನು ನಿಂದಿಸಿ, ಅವಾಚ್ಯ ಶಬ್ದಗಳಿಂದ ಬೈದ ವಿಡಿಯೋವನ್ನು ಸಾರ್ವಜನಿಕರು ಸೆರೆ ಹಿಡಿದಿದ್ದಾರೆ. ಇದು ವೈರಲ್ ಆಗುತ್ತಿದ್ದಂತೆ ಗೋಣಿಕೊಪ್ಪ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.