ದಾವಣಗೆರೆ: ವಿದ್ಯಾರ್ಥಿಗಳು ಅನುಭವಿಸುತ್ತಿರುವ ನಾನಾ ಸಮಸ್ಯೆಗಳನ್ನು ಬಗೆಹರಿಸಿವಂತೆ ಸರ್ಕಾರದ ವಿರುದ್ಧ ದಾವಣಗೆರೆ ಜಯದೇವ ಸರ್ಕಲ್ ನಲ್ಲಿ ಎಬಿವಿಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಒಂದು ವರ್ಷದಿಂದ ವಿದ್ಯಾಸಿರಿ ಯೋಜನೆಯ ವಿದ್ಯಾರ್ಥಿ ವೇತನ ನೀಡಿಲ್ಲ. ಹಳ್ಳಿಗಳಲ್ಲಿ ಮತ್ತು ನಗರಗಳಲ್ಲಿ ಸರಿಯಾದ ಬಸ್ ವ್ಯವಸ್ಥೆ ಇಲ್ಲ. ಹಾಸ್ಟೆಲ್ ವ್ಯವಸ್ಥೆ ಸರಿಯಾಗಿ ಸಿಗುತ್ತಿಲ್ಲ. ಉಚಿತ ಬಸ್ ನಿಂದ ಮಹಿಳೆಯರಿಗೆ ಗೌರವ ಇಲ್ಲದಂತಾಗಿದ್ದು. ಬಸ್ ಗಳನ್ನು ಸರಿಯಾಗಿ ನಿಲ್ಲಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಈ ರೀತಿಯ ಸಮಸ್ಯೆಗಳಿಂದ ನಮಗೆ ಸರಿಯಾದ ಶಿಕ್ಷಣ ಸಿಗುತ್ತಿಲ್ಲ ಎಂದು ವಿದ್ಯಾರ್ಥಿಗಳು ತಮ್ಮ ಆಕ್ರೋಶ ಹೊರಹಾಕಿ, ಕೂಡಲೇ ಈ ಸಮಸ್ಯೆಗಳನ್ನು ಬಗೆಹರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.