ಕಾರು ಹಾಗೂ ಆಟೋ ಮಧ್ಯೆ ಭೀಕರ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ. ಕಾರು ಹೊಸಕೋಟೆಯಿಂದ ಕೆ ಆರ್ ಪುರಂ ಮಾರ್ಗವಾಗಿ ತೆರಳುತ್ತಿದ್ದ ಸಂದರ್ಭದಲ್ಲಿ ಆಟೋಗೆ ಡಿಕ್ಕಿಯಾಗಿದೆ.
ಪರಿಣಾಮ ಕಾರು ಪಲ್ಟಿಯಾಗಿದೆ. ಈ ಘಟನೆ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇಡಹಳ್ಳಿ ಮೇಲ್ಸೇತುವೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೆಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತವಾದ ಆಟೋದಲ್ಲಿ ಮಗು ಕೂಡ ಇದ್ದು, ತಿರುಚಿದ ಗಾಯಗಳಾಗಿವೆ. ಕಾರಿನಲ್ಲಿದ್ದ ಮೂವರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಕೆ ಆರ್ ಪುರಂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


















