ಕೋಲಾರ: ಕಾರು ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಫಾರೆಸ್ಟ್ ವಾಚರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಕೋಲಾರದಲ್ಲಿ (Kolar) ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ (Srinivaspura) ತಾಲೂಕಿನ ಬಟ್ಟುವಾರಪಲ್ಲಿ ಕ್ರಾಸ್‌ನಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿ ಸೊಣ್ಣಕಲ್ಲು ಗ್ರಾಮದ ಫಾರೆಸ್ಟ್ ವಾಚರ್ ನರಸಿಂಹ (38) ಎಂದು ಗುರುತಿಸಲಾಗಿದೆ.
ಕಳೆದ 5 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಕೂಲಿ ನೌಕರನಾಗಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ, ಇಂದು ಕರ್ತವ್ಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಕಾರು ಹಾಗೂ ಚಾಲಕನನ್ನ ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.