ಉಡುಪಿ : ಉಡುಪಿ ಜಿಲ್ಲೆಯ ಧರ್ಮಾವರಂ ಆಡಿಟೋರಿಯಂ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೀನು ಸಾಗಣೆಯ ಪಿಕ್ ಅಪ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದೆ.
ಕುಂದಾಪುರ ಕಡೆಯಿಂದ ಬ್ರಹ್ಮಾವರದತ್ತ ಬರುತ್ತಿದ್ದ ಕಾರಿಗೆ ಪಿಕ್ ಅಪ್ ಹಿಂದಿನಿಂದ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಿಂದ ರಸ್ತೆಯ ಎಲ್ಲೆಂದರಲ್ಲಿ ಮೀನು ರಾಶಿ ಬಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ.
ಮೀನು ಮಲ್ಪೆಗೆ ಸಾಗಾಟವಾಗುತ್ತಿತ್ತು ಎಂದು ತಿಳಿದು ಬಂದಿದ್ದು, ಎರಡೂ ವಾಹನಗಳ ಸವಾರರು ಅಪಾಯದಿಂದ ಪಾರಾಗಿದ್ದಾರೆ.ಘಟನೆಯಿಂದ ಹೆದ್ದಾರಿಯಲ್ಲಿ ಸ್ವಲ್ಪ ಸಮಯ ಟ್ರಾಫಿಕ್ ಜಾಮ್ ಉಂಟಾಯಿತು.



















