ಶಿವಮೊಗ್ಗ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಬಳಿ ನಡೆದಿದೆ.
ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಆನಂದಪುರದಿಂದ ಸಾಗರ ಕಡೆಗೆ ತೆರಳುತ್ತಿದ್ದ ಟ್ರಕ್ ಪರಸ್ಪರ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಹಲವರಿಗೆ ಗಾಯವಾಗಿದ್ದು, ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಸಾಗರದ ಮರ್ಕಜ್ ಶಾಲೆಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲೇ ಸ್ಥಳಿಯ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಕೆಲ ಕಾಲ ರಸ್ತೆ ಸಂಚಾರ ಅಸ್ತವ್ಯಸ್ತ ಆಗಿರುವ ಪ್ರಸಂಗವೂ ನಡೆಯಿತು.



















