ಶಿವಮೊಗ್ಗ: ಲಾರಿ ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಓರ್ವ ವ್ಯಕ್ತಿ ಸಾನವ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತೂದೂರು ಸಮೀಪದ ಬೇಗುವಳ್ಳಿಯಲ್ಲಿ ಈ ಘಟನೆ ನಡೆದಿದೆ.
ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಸಾಗುತ್ತಿದ್ದ ಲಾರಿ ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿತ್ತು. ಈ ವೇಳೆ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಕಾರಿನಲ್ಲಿ ಐವರು ಪ್ರಯಾಣಿಕರು ಇದ್ದರು ಎನ್ನಲಾಗಿದೆ ಈ ಪೈಕಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೇ, ಮೂರು ಮಕ್ಕಳು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಮಾಳೂರು ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

















