ಮೈಸೂರು: ಕೆಎಸ್ಆರ್ಟಿಸಿ ಬಸ್ (KSRTC Bus) ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಚಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿಲ್ಲೆಯ (Mysuru) ಕೆ.ಆರ್ ನಗರ (KR Nagar) ತಾಲೂಕಿನ ಮಂಚನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಕಾರಿನ ಚಾಲಕ ಮೈಸೂರಿನ ಕನಕದಾಸನಗರ ನಿವಾಸಿ ಸುನೀಲ್ (34) ಸಾವನ್ನಪ್ಪಿದ್ದು, ರಮೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೂಲತಃ ಚಿಕ್ಕಮಗಳೂರಿನ ಮೂಡಿಗೆರೆ ನಿವಾಸಿಯಾದ ಸುನೀಲ್ ತಮ್ಮ ಕಾರಿನಲ್ಲಿ ಮೈಸೂರಿನಿಂದ ಹಾಸನದ ಕಡೆಗೆ ತೆರಳುತ್ತಿದ್ದರು. ಬಸ್, ಚಿಕ್ಕಮಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿತ್ತು. ಘಟನೆಯಲ್ಲಿ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.