ಕಾರವಾರ : ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವಿದೇಶಿಗರು ಸೇರಿದಂತೆ 24 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲ ತಾಲೂಕಿನ ಸುಂಕಸಾಳ ಹತ್ತಿರ ಈ ಘಟನೆ ನಡೆದಿದೆ.
ಎರಡು ಖಾಸಗಿ ಬಸ್ ಹಾಗೂ ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ. ಮಂಗಳೂರಿನಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ಲಾರಿ, ಬೆಂಗಳೂರಿನಿಂದ ಗೋವಾಗೆ ತೆರಳುತ್ತಿದ್ದ ಎರಡು ಬಸ್ ಗಳ ಮಧ್ಯೆ ಈ ಸರಣಿ ಅಪಘಾತ ಸಂಭವಿಸಿದೆ.
ಲಾರಿ ಮತ್ತು ಸಿಬರ್ಡ್ ಬಸ್ ಮುಖಾಮುಖಿ ಡಿಕ್ಕಿಯಾದವು. ನಂತರ ಹಿಂಬದಿಯಿಂದ ಸಿಬರ್ಡ್ ಬಸ್‌ಗೆ ಗಣೇಶ್ ಟ್ರಾವೆಲ್ಸ್ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರಿ ಪಲ್ಟಿಯಾಗಿದೆ. ಚಾಲಕ ಗಂಭೀರವಾಗಿದ್ದಾನೆ.
ಹಂಪಿಯಿಂದ ಗೋವಾಕ್ಕೆ ತೆರಳುತ್ತಿದ್ದ 12 ವಿದೇಶಿ ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳು ಕಾರವಾರ, ಅಂಕೋಲ, ಕಾರವಾರ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಬಾಲಕಿ ಕಿಡ್ನ್ಯಾಪ್, ಅತ್ಯಾಚಾರ ಕೇಸ್ | ಆರೋಪಿಗೆ 20 ವರ್ಷ ಜೈಲು, 30 ಸಾವಿರ ದಂಡ



















