ಬೆಂಗಳೂರು : ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಕಾರು ಅಪಘಾತ ಸಂಭವಿಸಿ, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮುದುಗೆರೆ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಮೈಸೂರಿನಿಂದ ಬೆಂಗಳೂರಿಗೆ ಮಿಟಿಂಗ್‌ಗೆ ತೆರಳುತ್ತಿದ್ದ ವೇಳೆ ಕಾರಿನ ಟಯರ್ ಬ್ಲಾಸ್ಟ್ ಆಗಿ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಕಾರು ಚಾಲಕ ಆನಂದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೈಸೂರು ಮೂಲದ ಬಿಇಒಗಳಾದ ಪ್ರಕಾಶ್, ರಾಜು, ಕೃಷ್ಣ ಮತ್ತು ಮಹೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ತಕ್ಷಣ ಮಂಡ್ಯ ಹಾಗೂ ಚನ್ನಪಟ್ಟಣದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


















