ಪ್ರಯಾಗ್‌ರಾಜ್: ಹೊಸಕೋಟೆಯಿಂದ (Hoskote) ಮಹಾ ಕುಂಭಮೇಳಕ್ಕೆ (Maha Kumbh Mela) ಹೋಗುತ್ತಿದ್ದ ಸಂದರ್ಭದಲ್ಲಿ ರಸ್ತೆ ಅಪಘಾತವಾಗಿ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಪ್ರಯಾಗ್‌ರಾಜ್‌ಗೆ (Prayagraj) 150 ಕಿ.ಮೀ ದೂರದ ಮಧ್ಯಪ್ರದೇಶದಲ್ಲಿ ನಡೆದಿದೆ. ಹೊಸಕೋಟೆ ಹಾಗೂ ಎಲೆಕ್ಟ್ರಾನಿಕ್ ಸಿಟಿಯ ಹುಸ್ಕೂರು ಗ್ರಾಮದ ಹಲವರು ಈ ಘಟನೆಯಲ್ಲಿ ಗಾಯಗೊಂಡಿದ್ದಾರೆ.
ಹೊಸಕೋಟೆ ಹಾಗೂ ಎಲೆಕ್ಟ್ರಾನಿಕ್ ಸಿಟಿಯ ಹುಸ್ಕೂರು ಗ್ರಾಮದಿಂದ 14 ಜನ ಮಹಾ ಕುಂಭಮೇಳಕ್ಕೆ ಹೊರಟಿದ್ದರು. 14 ಜನರ ಪೈಕಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಒನ್ ವೇನಲ್ಲಿ ಬಂದ ಟ್ಯಾಂಕರ್ ವಾಹನ ಪ್ರಯಾಣಿಕರಿದ್ದ ಟಿಟಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟಿಟಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ತಿಳಿದು ಬಂದಿದೆ.