ಬೆಂಗಳೂರು: ಮಹಾ ಕುಂಭಮೇಳಕ್ಕೆ (Maha Kumbh Mela) ತೆರಳುತ್ತಿದ್ದ ಸಂದರ್ಭದಲ್ಲಿ ಉತ್ತರ ಪ್ರದೇಶದ (Uttar Pradesh) ಹತ್ತಿರ ಸಂಭವಿಸಿದ ಅಪಘಾತದಲ್ಲಿ ರಾಜ್ಯದ ಐವರು ಸಾವನ್ನಪ್ಪಿದ್ದು, ಪರಿಹಾರ ಘೋಷಿಸಲಾಗಿದೆ.
ಈ ಭೀಕರ ಅಪಘಾತದಲ್ಲಿ ಬೀದರ್ (Bidar) ಜಿಲ್ಲೆಯ ಐವರು ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ (Eshwar Khandre) 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ವಿಷಯವಾಗಿ ಮಾತನಾಡಿದ ಅವರು, ಮಹಾ ಕುಂಭಮೇಳಕ್ಕೆ ಜಿಲ್ಲೆಯ ಲಾಡಗೇರಿಯ 14 ಜನರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, 8 ಜನರು ಗಾಯಗೊಂಡಿರುವ ಸುದ್ದಿ ತಿಳಿದು ಆಘಾತವಾಯಿತು. ಕೂಡಲೇ ಜಿಲ್ಲಾಡಳಿತಕ್ಕೆ ಸೂಚನೆ ನೀಡಿ ಮೃತರ ಪಾರ್ಥವ ಶರೀರವನ್ನು ಬೀದರ್‌ಗೆ ತರಲು ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ನೀಡಲು ಸೂಚಿಸಿದ್ದೇನೆ ಎಂದಿದ್ದಾರೆ.
ಈ ಸಂಕಷ್ಟದ ಸಮಯದಲ್ಲಿ ಸರ್ಕಾರ ಅವರೊಂದಿಗೆ ನಿಲ್ಲುತ್ತದೆ. ಮೃತರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ದೇವರು ನೀಡಲಿ, ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದಿದ್ದಾರೆ.