ಬೆಳಗಾವಿ : ಬೆಳಗಾವಿ ಜಿಲ್ಲೆ, ರಾಯಬಾಗ ತಾಲೂಕಿನ ನಾಗರಾಳ ಗ್ರಾಮದ ಹೊರವಲಯದಲ್ಲಿರುವ ಕಟ್ಟಿಗೆ ಕಾರ್ಖಾನೆಯಲ್ಲಿ ನಸುಕಿನ ಜಾವ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ಅವಘಡದ ಪರಿಣಾಮವಾಗಿ ಕಾರ್ಖಾನೆಯಲ್ಲಿ ಸಂಗ್ರಹಿಸಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಕಟ್ಟಿಗೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಇದನ್ನೂ ಓದಿ : ಕಸದ ರಾಶಿಗೆ ಹೊತ್ತಿಕೊಂಡ ಬೆಂಕಿ.. ಆವರಿಸಿದ ದಟ್ಟ ಹೊಗೆ


















