ಬೆಂಗಳೂರು: ರಸ್ತೆಯಲ್ಲಿ ನಿಂತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಹಾಗೂ ಬೈಕ್ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಕಾರಿಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಪಕ್ಕದಲ್ಲಿ ನಿಂತಿದ್ದ ಬೈಕ್ ಗೂ ಬೆಂಕಿ ತಗುಲಿದೆ. ಪರಿಣಾಮ ಎರಡೂ ವಾಹನಗಳು ಸುಟ್ಟು ಭಸ್ಮವಾಗಿವೆ. ಬೆಂಗಳೂರಿನ ಲಾಲ್ ಬಾಗ್ ಮೆಟ್ರೊ ನಿಲ್ದಾಣದ ಬಳಿ ಈ ಘಟನೆ ನಡೆದಿದೆ.
ಸೋಮವಾರ ಸಂಜೆ 4 ಗಂಟೆ ವೇಳೆಗೆ ಈ ಘಟನೆ ಸಂಭವಿಸಿದೆ. ಆದರೆ, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಸವನಗುಡಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.