ರಾಯ್ಪುರ: ಪ್ಯಾಸೆಂಜರ್ ರೈಲ್ಲೊಂದು ಸರಕು ರೈಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕನಿಷ್ಠ ಆರು ಜನ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ಮಂಗಳವಾರ ಜೈರಾಮ್‌ನಗರ ನಿಲ್ದಾಣದ ಬಳಿ ನಡೆದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಸ್ಥಳೀಯ ಪ್ಯಾಸೆಂಜರ್ ರೈಲು ಮತ್ತು ಸರಕು ರೈಲು ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ರಕ್ಷಣಾ ಮತ್ತು ಪರಿಹಾರ ತಂಡಗಳು ಸ್ಥಳಕ್ಕೆ ತಲುಪಿದ್ದು, ಗಾಯಾಳುಗಳ ರಕ್ಷಣೆ ನಡೆಯುತ್ತಿದೆ.
ಗೆವ್ರಾ ರಸ್ತೆಯಿಂದ ಬಿಲಾಸ್ಪುರಕ್ಕೆ ಪ್ರಯಾಣಿಸುತ್ತಿದ್ದ ಮೆಮು ಸ್ಥಳೀಯ ರೈಲು (ಸಂಖ್ಯೆ 68733) ಇಂದು ಸಂಜೆ 4 ಗಂಟೆ ಸುಮಾರಿಗೆ ಗಟೋರಾ ಮತ್ತು ಬಿಲಾಸ್ಪುರ ನಡುವಿನ ಮೇಲ್ಮುಖ ಮಾರ್ಗದಲ್ಲಿ ಸರಕು ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ಈ ಮಾರ್ಗದಲ್ಲಿ ರೈಲು ಸೇವೆಗಳನ್ನು ನಿಲ್ಲಿಸಲಾಗಿದೆ ಮತ್ತು ಹಲವಾರು ಎಕ್ಸ್‌ಪ್ರೆಸ್ ಮತ್ತು ಪ್ಯಾಸೆಂಜರ್ ರೈಲುಗಳನ್ನು ರದ್ದುಗೊಳಿಸಲಾಗಿದೆ. ಇದನ್ನೂ ಓದಿ : ಬಿಹಾರ ಚುನಾವಣೆ | ಕರ್ನಾಟಕದಲ್ಲಿ ಕೆಲಸ ಮಾಡುವ ಬಿಹಾರಿಗಳಿಗೆ 3 ದಿನ ರಜೆ ಕೊಡಿ | ಡಿಸಿಎಂ ಡಿಕೆಶಿ ಮನವಿ



















