ಮಹಾರಾಷ್ಟ್ರ ಹಾಗೂ ಜಾರ್ಖಂಡ್ ಹಲವು ರಾಜ್ಯಗಳಿಗೆ ನಡೆದಿದ್ದ ಉಪ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದು, ಭಾರೀ ಜಿದ್ದಾಜಿದ್ದಿ ಕಾಣಿಸುತ್ತಿದೆ. ಎಲ್ಲೆಡೆ ನೆಕ್ ಟು ನೆಕ್ ಫೈಟ್ ಕಂಡು ಬರುತ್ತಿದೆ.
ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಮಹಾಯುತಿ ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) ನಡುವಿನ ಸ್ಪರ್ಧಿಸಿದ್ದು, ಎಲ್ಲರ ಚಿತ್ತ ಇತ್ತ ಕಡೆ ಎನ್ನುವಂತಾಗಿದೆ. ಸದ್ಯದ ಆರಂಭಿಕ ಮಾಹಿತಿಯಂತೆ ಬಿಜೆಪಿ ನೇತೃತ್ವದ ಆಡಳಿತಾರೂಢ ಮೈತ್ರಿಯು ಮಹಾರಾಷ್ಟ್ರದಲ್ಲಿ 288 ಕ್ಷೇತ್ರಗಳ ಪೈಕಿ 177 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನುಳಿದ ಪಕ್ಷಗಳು 93ರಲ್ಲಿ ಮುನ್ನಡೆ ಕಾಯ್ದುಕೊಂಡಿವೆ ಎಂದು ವರದಿ ಹೇಳುತ್ತಿದೆ.
ಜಾರ್ಖಂಡ್ ಎನ್‌ಡಿಎ 81 ಸ್ಥಾನಗಳಲ್ಲಿ 41 ಮತ್ತು 37 ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ವರ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಪುತ್ರ ಆದಿತ್ಯ ಮುನ್ನಡೆ ಸಾಧಿಸಿದ್ದಾರೆ.
ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮುನ್ನಡೆ ಸಾಧಿಸಿದ್ದಾರೆ. ಮಹಾರಾಷ್ಟ್ರ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 149 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ, ಶಿವಸೇನೆ 81 ಸ್ಥಾನಗಳಲ್ಲಿ ಮತ್ತು ಎನ್‌ಸಿಪಿ 59 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ 101 ಸ್ಥಾನಗಳಲ್ಲಿ, ಶಿವಸೇನೆ (ಯುಬಿಟಿ) 95 ಮತ್ತು ಎನ್‌ಸಿಪಿ (ಎಸ್‌ಪಿ) 86 ಸ್ಥಾನಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದೆ.