ಬೆಂಗಳೂರು: ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ತನಿಖೆಗೆ ನಿವೃತ್ತ ಐಎಎಸ್ ಅಧಿಕಾರಿ ಸುಧೀರ್ ಕುಮಾರ್ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಿದೆ.
ತನಿಖಾಧಿಕಾರಿಗೆ 6 ತಿಂಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಹಿಂದಿನ ಎಸಿಎಸ್ ಡಾ.ಇ.ವಿ.ರಮಣರೆಡ್ಡಿ ವರದಿ ಪರಿಶೀಲಿಸಿ ತನಿಖೆ ನಡೆಸುವಂತೆ ಆದೇಶ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.
ಎರಡ್ಮೂರು ವರ್ಷಗಳಿಂದ 3000 ಕೋಟಿ ರೂ. ಅನುದಾನದಲ್ಲಿ ವ್ಯಾಪಕ ಅಕ್ರಮಗಳು ನಡೆದಿರುವ ಆರೋಪಗಳು ಕೇಳಿವೆ. ಹೀಗಾಗಿ ತನಿಖೆ ನಡೆಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಿರ್ದಾಕ್ಷಿಣ್ಯವಾಗಿ ತನಿಖೆ ನಡೆಸಬೇಕೆಂದು ಆದೇಶಿಸಿದ್ದಾರೆ.