ಉಡುಪಿ: ಜಿಲ್ಲೆಯ ಬ್ರಹ್ಮಾವರ ಠಾಣೆಯಲ್ಲಿದ್ದ ಆರೋಪಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಆರೋಪಿಯನ್ನು ಕೇರಳ ಮೂಲದ ಬಿಜು ಮೋಹನ್ (44) ಎನ್ನಲಾಗಿದೆ. ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಮೃತ ಬಿಜು ಕಾರ್ಮಿಕನಾಗಿದ್ದ ಎನ್ನಲಾಗಿದೆ.
ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಬಿಜು ಮೋಹನ್ ನನ್ನು ಬಂಧಿಸಿದ್ದರು. ಹೀಗಾಗಿ ಆರೋಪಿಯನ್ನು ತಂದು ಠಾಣೆಯಲ್ಲಿ ಇರಿಸಿದ್ದರು. ಆದರೆ, ಬೆಳಗ್ಗೆ ಆರೋಪಿಯು ಟಾಯ್ಲೆಟ್ ನಲ್ಲಿ ಕುಸಿದು ಬಿದ್ದಿದ್ದಾನೆ. ಕೂಡಲೇ ಪೊಲೀಸರು ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವೈದ್ಯರು ಹೇಳಿದ್ದಾರೆ. ಠಾಣೆಗೆ ಉಡುಪಿ ಎಸ್ಪಿ ಡಾ.ಅರುಣ್ ಕುಮಾರ್ ಭೇಟಿ ನೀಡಿದ್ದಾರೆ.
ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬರುವಾಗಲೇ ಆತ ಸಾವನ್ನಪ್ಪಿದ್ದಾನೆ. ಡೆಂಗ್ಯೂ ಜ್ವರ ಹಾಗೂ ಮಾನಸಿಕ ಕಾಯಿಲೆಗೆ ಸಂಬಂಧಿಸಿದಂತೆ ಈತ ಚಿಕಿತ್ಸೆ ಪಡೆದಿರುವ ಮಾಹಿತಿ ಇದೆ. ಈಗಾಗಲೇ ಪ್ರಾಥಮಿಕ ತನಿಖೆ ಮಾಡಲಾಗುತ್ತಿದೆ.