ಬೆಂಗಳೂರು : ಚಾಕುವಿನಿಂದ ವ್ಯಕ್ತಿಯ ಕತ್ತು ಸೀಳಿ ಕೊಲೆಗೈಯಲು ಯತ್ನಿಸಿರುವ ಘಟನೆ ನಗರದ ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾರಾಯಣ್ (38) ಹಲ್ಲೆಗೊಳಗಾದ ವ್ಯಕ್ತಿ. ತೀವ್ರ ರಕ್ತಸ್ರಾವದಿಂದ ಒದ್ದಾಡ್ತಿದ್ದವನನ್ನ ಪೊಲೀಸರು ಆಸ್ಪತ್ರೆಗೆ ಸೇರಿಸಿ ಪ್ರಾಣ ಉಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ 6 ಗಂಟೆಗೆ ಈ ಘಟನೆ ನಡೆದಿದ್ದು, ರಾತ್ರಿ ಶಿಫ್ಟ್ ಕೆಲಸ ಮುಗಿಸಿ ಮನೆಗೆ ನಡೆದುಕೊಂಡು ಹೋಗ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಓರ್ವ ಬಂದು ಅಟ್ಯಾಕ್ ಮಾಡಿ, ಗಂಟಲು ಬಳಿ ಕೊಯ್ದು ಆರೋಪಿ ಎಸ್ಕೇಪ್ ಆಗಿದ್ದಾನೆ.
ರಕ್ತದ ಮಡುವಲ್ಲಿ ಒದ್ದಾಡ್ತಿದ್ದವನನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಬಂದು ನಾರಾಯನ್‌ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯ ನಾರಾಯಣ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಆದ್ರೆ ಘಟನೆ ನಡೆದಿದ್ದು ಎಲ್ಲಿ? ಯಾಕೆ ಕೊಲೆ ಯತ್ನ ನಡೆದಿದೆ ಅನ್ನೋ ಬಗ್ಗೆ ಮಾಹಿತಿ ಇಲ್ಲ. ಗಾಯಾಳು ಮಾತಾಡೋ ಪರಿಸ್ಥಿತಿಯಲ್ಲಿ ಇರದ ಕಾರಣ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ. ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಕೊಲೆ ಯತ್ನ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ : ಭಾರತದಲ್ಲಿ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರಕ್ಕೆ ತಡೆ.. ಇಸ್ರೇಲ್ ಜೊತೆಗಿನ ರಾಜತಾಂತ್ರಿಕ ಸಂಬಂಧಕ್ಕೆ ಧಕ್ಕೆ ಭೀತಿಯೇ ಕಾರಣ?


















