ಬೆಂಗಳೂರು: ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕೋರ್ಟ್‌ನ 5ನೇ ಮಹಡಿಯಿಂದ ಬಿದ್ದು ಗೌತಮ್ ಎಂಬ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಚಾರಣೆ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ ಆರೋಪಿಯನ್ನು ಕೋರ್ಟ್ ಗೆ ಕರೆತರಲಾಗಿತ್ತು. ಈ ವೇಳೆ ಕೋರ್ಟ್ ನ ಮಹಡಿಯಿಂದ ಆರೋಪಿ ಜಿಗಿದಿದ್ದಾನೆ. ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಮೃತಪಟ್ಟಿದ್ದಾನೆ.
ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಮೃತ ಗೌತಮ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆ ಆರೋಪಿಯನ್ನು ಕೋರ್ಟ್ ಗೆ ಕರೆತಂದಾಗ ಕುಟುಂಬದವರು ಕೂಡ ಉಪಸ್ಥಿತರಿದ್ದರು. ಅವಮಾನ ತಾಳಲಾರದೆ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.