ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾಗೌಡ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಪೊಲೀಸರ ಕಸ್ಟಡಿಯಲ್ಲಿರುವ ಪವಿತ್ರಾ ಗೌಡ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. ಪವಿತ್ರಾಗೌಡ ಅಸ್ವಸ್ಥರಾಗುತ್ತಿದ್ದಂತೆ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ವೈದ್ಯರನ್ನು ಕರೆಸಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇಂದು ಮಧ್ಯಾಹ್ನವೇ ಅವರು ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆಗಿದ್ದಾರೆ. ಪ್ರಕರಣ ಸಂಬಂಧವಾಗಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.