ಬೆಂಗಳೂರು: ಲಂಚಕ್ಕಾಗಿ ಕೈದಿಯ ಮೇಲೆ ಜೈಲು ಸಿಬ್ಬಂದಿ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ (parappana agrahara central jail)ಈ ಆರೋಪ ಕೇಳಿ ಬಂದಿದೆ. ವಿಚಾರಣಾಧೀನ ಕೈದಿ ಬಳಿ ಲಂಚಕ್ಕೆ ಬೇಡಿಕೆ ಇಡುವುದರ ಜೊತೆಗೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. 2024ರಲ್ಲಿ ಸೊಲದೇವನಹಳ್ಳಿಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಬಂಧಿಸಲ್ಪಟ್ಟ ಹಮೀದ್ ಎಂಬಾತ ಅಕ್ಟೋಬರ್ 4ರಿಂದ ನ್ಯಾಯಾಂಗ ಬಂಧನದಲ್ಲಿದ್ದ. ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿರುವ ಆತನ ಬಳಿ ಹಣ ಕೇಳುವುದರ ಜೊತೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈಗ ಹಮೀದ್ ತಾಯಿ, ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.