ಬೆಂಗಳೂರು ಗ್ರಾಮಾಂತರ : ವೃದ್ಧರನ್ನೇ ಟಾರ್ಗೆಟ್ ಮಾಡಿಕೊಂಡು ಚೈನ್ ಸ್ನ್ಯಾಚಿಂಗ್ ಮಾಡುತ್ತಿದ್ದ ಆರೋಪಿಗಳನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸಪೆಕ್ಟರ್ ಸಾಧಿಕ್ ಪಾಷಾ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಆರೋಪಿಗಳ ಹೆಡೆಮುರಿಕಟ್ಟಲಾಗಿದೆ. ಬಂಧಿತ ಆರೋಪಿಗಳನ್ನು ಶ್ರೀನಿವಾಸಮೂರ್ತಿ (31) ಹಾಗೂ ವೆಂಕಟೇಶ (23) ಎಂದು ಗುರುತಿಸಲಾಗಿದೆ. ಇವರು ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಗಳಾಗಿದ್ದಾರೆ.
ದೊಡ್ಡಬಳ್ಳಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚೈನ್ ಸ್ನ್ಯಾಚಿಂಗ್‌ಗೆ ಕೈಚಳಕ ಮಾಡುವ ವೇಳೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳಿಂದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 40 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದು, ಅದನ್ನು ಸಂಬಂಧಿಸಿದ ಮಾಲೀಕರಿಗೆ ವಾಪಸ್ ನೀಡಲಾಗಿದೆ. ಕಳವಾದ ಚಿನ್ನವನ್ನು ಮರಳಿ ಪಡೆದ ದೂರುದಾರರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಕಾರ್ಯಾಚರಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ : ವಿವಿಧ ಬೇಡಿಕೆಗೆ ಆಗ್ರಹಿಸಿ ಬ್ಯಾಂಕ್ ಸಿಬ್ಬಂದಿಗಳ ಪ್ರತಿಭಟನೆ | ರಾಜ್ಯದ ಜನತೆಗೆ ತಟ್ಟಿದ ಮುಷ್ಕರದ ಬಿಸಿ



















