ಕಲಬುರಗಿ: 28 ವಿಶ್ವವಿದ್ಯಾನಿಲಯಗಳ ನಕಲಿ ಅಂಕಪಟ್ಟಿ (Fake Certificates) ತಯಾರಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ರಾಜೀವ ಸಿಂಗ್ ಆರೋರಾ ಎಂದು ಗುರುತಿಸಲಾಗಿದೆ. ಈತ ಪ್ರಕರಣದ ಕಿಂಗ್ ಪಿನ್ ಎನ್ನಲಾಗಿದೆ. ಆರೋಪಿಯನ್ನು ಕಲಬುರಗಿಯ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ದೇಹಲಿ ಮೂಲದ ರಾಜೀವ ಸಿಂಗ್ ಆರೋರಾ ಬಂಧಿತ ಆರೋಪಿ. ನವದೆಹಲಿಯ ರಾಮಪಾರ್ಕ್ ಅಪಾರ್ಟ್ಮೆಂಟ್ ದ್ವಾರಕ್ ಮೋಡ್ ನಲ್ಲಿ ಬಂಧಿಸಲಾಗಿದೆ.
ನಕಲಿ ಅಂಕಪಟ್ಟಿ ಜೊತೆಗೆ ನಕಲಿ ವಿಶ್ವವಿದ್ಯಾಲಯ ಸೃಷ್ಟಿ ಮಾಡಿ ಅದರ ಹೆಸರಿನಲ್ಲಿ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಈತ ಬೆಂಗಳೂರು, ಮೈಸೂರು, ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಹೆಸರಿನಲ್ಲಿ ನಕಲಿ ಅಂಕಪಟ್ಟಿ ತಯಾರು ಮಾಡುತ್ತಿದ್ದ ಎನ್ನಲಾಗಿದೆ.
ರಾಜೀವ ಸಿಂಗ್ ಆರೋರಾ ಬಂಧಿತ ಆರೋಪಿ. ಪಿಯುಸಿ, ಡಿಪ್ಲೋಮಾ ಇನ್ ಎಜುಕೇಶನ್, ಡಿಪ್ಲೋಮಾ ಆಫ್ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ, ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್, ಡಾಕ್ಟರ್ ಆಫ್ ಫಿಲಾಸಫಿ, ಬಿ ಟೇಕ್ ಸೇರಿ ವಿವಿಧ ಕೋರ್ಸ್ಗಳ ನಕಲಿ ಅಂಕಪಟ್ಟಿ ತಯಾರಿಸುತ್ತಿದ್ದ ಎನ್ನಲಾಗಿದೆ.
ಬಂಧಿತನಿಂದ 522 ನಕಲಿ ಅಂಕಪಟ್ಟಿಗಳು, 1626 ಖಾಲಿ ಅಂಕಪಟ್ಟಿಗಳು, 36 ಮೊಬೈಲ್, 2 ಲ್ಯಾಪ್ ಟಾಪ್, 1 ಪ್ರಿಂಟರ್ ಸೇ, ವಿವಿಧ ವಿಶ್ವವಿದ್ಯಾಲಯಗಳ 122 ನಕಲಿ ಸೀಲ್ ಗಳು ಸೇರಿದಂತೆ ಹಲವರು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.