ಬೆಂಗಳೂರು: ರೇಣುಕಾಸ್ವಾಮಿ ಕೊಲೆ(Renukaswamy murder) ಪ್ರಕರಣದ ಆರೋಪಿ ಹಾಗೂ ನಟ ದರ್ಶನ್ ಕೋರ್ಟ್(Court) ಮೊರೆ ಹೋಗಿದ್ದಾರೆ. ದರ್ಶನ್ ಬಂಧನದ ಸಂದರ್ಭದಲ್ಲಿ ಪೊಲೀಸರು,(police) ಹಣವನ್ನು ವಶಕ್ಕೆ ಪಡೆದಿದ್ದರು. ಈಗ ಆ ಹಣ ಮರಳಿ ನೀಡುವಂತೆ ನಟ ದರ್ಶನ್ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್(Darshan) ಅರೆಸ್ಟ್ ಆಗುತ್ತಿದ್ದಂತೆ ಅವರಿಂದ 37 ಲಕ್ಷ ರೂ. ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣ ಮುಚ್ಚಿ ಹಾಕಲು ಆ ಹಣ ಬಳಕೆ ಮಾಡಿಕೊಳ್ಳಲಾಗಿತ್ತು ಎಂದು ಪೊಲೀಸರು ಆರೋಪಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆಯನ್ನು ತಾವೇ ಮಾಡಿರುವುದಾಗಿ ಒಪ್ಪಿಕೊಳ್ಳಲು ಹೊರಗಡೆಯಿಂದ ಕರೆಸಲಾಗಿದ್ದ ಮೂವರಿಗೆ ಒಂದಿಷ್ಟು ಹಣ ಸಹ ನೀಡಲಾಗಿತ್ತು ಎಂದು ಹಣ(money) ವಶಪಡಿಸಿಕೊಂಡಿದ್ದ ಪೊಲೀಸರು ಆದಾಯ ತೆರಿಗೆ(Income tax) ಇಲಾಖೆಗೆ ಮಾಹಿತಿ ನೀಡಿದ್ದರು.
ಆದರೆ ನ್ಯಾಯಾಲಯದಲ್ಲಿ ದರ್ಶನ್ ಪರ ವಕೀಲರು, (Lawyers) ವಶಪಡಿಸಿಕೊಂಡ ಹಣವು ಸಾಲವಾಗಿ ಪಡೆದಿದ್ದ ಹಣ ಎಂದು ವಾದಿಸಿದ್ದರು. ಮೋಹನ್ ರಾಜ್(Mohan Raj) ಎಂಬುವರಿಗೆ ಸಾಲದ ರೂಪದಲ್ಲಿ ನಟ ದರ್ಶನ್ ಹಣ ನೀಡಿದ್ದರು. ಆ ಹಣವನ್ನು ಮೋಹನ್ ರಾಜ್, ದರ್ಶನ್ಗೆ ಮರಳಿದ್ದರು. ಆ ಹಣವನ್ನು ದರ್ಶನ್ ತಮ್ಮ ನಿವಾಸದಲ್ಲಿ ಇರಿಸಿಕೊಂಡಿದ್ದರು ಎಂದು ವಾದಿಸಿದ್ದರು.
ಈಗ ಆ ಹಣವನ್ನು ಮರಳಿ ನೀಡಬೇಕೆಂದು 57ನೇ ಸಿಸಿಎಚ್ ನ್ಯಾಯಾಲಯಕ್ಕೆ(57th CCH Court) ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಪೊಲೀಸರು ಅಥವಾ ಆದಾಯ ತೆರಿಗೆ ಇಲಾಖೆ ಆಕ್ಷೇಪಣೆ ಸಲ್ಲಿಸಿದಲ್ಲಿ ಮತ್ತೊಂದು ಸುತ್ತಿನ ವಾದ-ವಿವಾದ ನಡೆಯಲಿದೆ.