ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಆಂಡ್ ಗ್ಯಾಂಗ್ ಪೊಲೀಸ್ ವಶದಲ್ಲಿದೆ. ಪೊಲೀಸರು ಕೊಲೆಯ ಹಿಂದಿನ ರಹಸ್ಯ ಬೇಧಿಸುವ ಕಾರ್ಯ ಮಾಡುತ್ತಿದ್ದಾರೆ. ಆರೋಪಿಗಳು ಕೊಲೆ ಮಾಡಿ ಚಿನ್ನಾಭರಣ ದೋಚಿದ್ದಾರೆ ಎಂದು ತಿಳಿದು ಬಂದಿದೆ.
ಗ್ಯಾಂಗ್ ನ ಕರಾಳ ಮುಖಗಳು ರಿವೀಲ್ ಆಗುತ್ತಿವೆ. ಬಡಪಾಯಿಯನ್ನು ಚಿತ್ರ-ವಿಚಿತ್ರವಾಗಿ ಹಿಂಸೆ ನೀಡಿ ಕೊಲೆ ಮಾಡಿದ್ದಲ್ಲದೇ, ಮೈಮೇಲಿದ್ದ ಒಡವೆಯನ್ನು ಕೂಡ ದೋಚಿರುವುದು ಬಯಲಾಗಿದೆ. ಪೊಲೀಸರ ತನಿಖೆ ಸಂದರ್ಭದಲ್ಲಿ ಈ ಸ್ಫೋಟಕ ಮಾಹಿತಿಯನ್ನು ಆರೋಪಿ ರವಿ ಬಾಯ್ಬಿಟ್ಟಿದ್ದಾನೆ. ಮೈಮೇಲಿದ್ದ ಚಿನ್ನವನ್ನು ಆರೋಪಿ ಜಗ್ಗ ದೋಚಿದ್ದಾನೆ ಎಂದು ಪೊಲೀಸರ ಮುಂದೆ ರವಿ ಹೇಳಿದ್ದಾನೆ ಎನ್ನಲಾಗಿದೆ.
ಪೊಲೀಸ್ ಠಾಣೆಗೆ ಶರಣಾಗುವಂತೆ ಹೇಳಿದರು. ಆದರೆ ಭಯದಿಂದ ಠಾಣೆಗೆ ಹೋಗದೆ ಕಾರಿನಲ್ಲಿ ದುರ್ಗಕ್ಕೆ ಬಂದೆ. ಕಾರಿನಲ್ಲಿ ಜಗ್ಗನ ಜೊತೆ ಚಿತ್ರದುರ್ಗಕ್ಕೆ ಬಂದುಬಿಟ್ಟೆ. ಜಗ್ಗ ಚಿನ್ನಾಭರಣ ತೆಗೆದುಕೊಂಡು ಬಂದಿದ್ದ ಎಂದು ರವಿ ಹೇಳಿದ್ದಾನೆ. ಜೂನ್ 8 ರಂದು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಬೆಂಗಳೂರಿಗೆ ಕರೆತಂದು ಪಟ್ಟಣಗೆರೆ ಶೆಡ್ ನಲ್ಲಿ ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿತ್ತು. ಹತ್ಯೆಯ ನಂತರ ಶವವನ್ನು ಸುಮ್ಮನಹಳ್ಳಿ ಮೋರಿಗೆ ಬಿಸಾಕಿದ್ದರು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ 17 ಜನರನ್ನು ಪೊಲೀಸರು ಬಂದಿಸಿದ್ದಾರೆ.