ಹುಬ್ಬಳ್ಳಿ: ಗಬ್ಬೂರ ಸರ್ಕಲ್ನಲ್ಲಿ ಸಾರ್ವಜನಿಕರಿಗೆ ಕತ್ತಿ ತೋರಿಸಿ ಭಯ ಹುಟ್ಟಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈಶ್ವರ ನಗರದ ಖ್ವಾಜಾ ಹುಸೇನ ನದಾಫ ಬಂಧಿತ ಆರೋಪಿಯಾಗಿದ್ದಾನೆ. ಬೆಂಡಿಗೇರಿ ಪೊಲೀಸ್ ಠಾಣೆಯ ಆ್ಯಂಟಿ ಸ್ಟ್ಯಾಬಿಂಗ್ ಸ್ಕ್ವಾಡ್ ಈ ಕಾರ್ಯಾಚರಣೆ ನಡೆಸಿದೆ.
ಬಂಧಿತನಿಂದ ಒಂದು ಕತ್ತಿ ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಈ ಕುರಿತು ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

















