ಪಕ್ಷದ ಶಿಸ್ತನ್ನು ಮೀರಿ ನಡೆಯುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿಯಲ್ಲಿ ಬಣಗಳ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಜೋಶಿ, ಪಕ್ಷದ ಒಳಗೆ ಯಾರಲ್ಲಾದರೂ ದೂರು, ದುಃಖ., ದುಮ್ಮಾಆನ ಇದ್ದರೇ ಅವರನ್ನು ಖುದ್ಧಾಗಿ ಮಾತನಾಡುತ್ತೇವೆ. ಆದರೇ ಪಕ್ಷದ ಶಿಸ್ತನ್ನು ಉಲ್ಲಂಘಿಸುವುದನ್ನು ಸಹಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಪಕ್ಷದ ಶಿಸ್ತನ್ನು ಯಾರೇ ಉಲ್ಲಂಘಿಸಿದರೂ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದಷದ್ದಾರೆ.
ಕುನ್ಹಾ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ತಮ್ಮ ಪರವಾಗಿ ಇರುವವರನ್ನೇ ಸಮಿತಿಯ ಅಧ್ಯಕ್ಷರನ್ನಾಗಿ ಮಾಡುವುದು ಸೂಕ್ತವಲ್ಲ. ನಿಷ್ಪಕ್ಷಪಾತವಾಗಿ ಇಂತಹ ಸಂದರ್ಭಗಳಲ್ಲಿ ಸಮಿತಿ ವರದಿಯನ್ನು ಸಲ್ಲಿಸಬೇಕು. ವರದಿಯನ್ನು ಸಂಪೂರ್ಣವಾಗಿ ಓದುವವರೆಗೆ ಈ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಆದರೆ ಪೊಲೀಸರ ಮೇಲೆ ಹೊಣೆಗಾರಿಕೆ ಹಾಕುವುದು ಸರಿಯಲ್ಲ ಎಂದು ಹೇಳಿದ್ದಾರೆ.