ಮಂಡ್ಯ : ಕ್ಯಾನ್‌ಗಳಲ್ಲಿ ಪೆಟ್ರೋಲ್ ತುಂಬಿಸಿ ಕೊಟ್ಟರೆ ಪೆಟ್ರೋಲ್ ಬಂಕ್ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಂಡ್ಯ ಡಿಸಿ ಡಾ.ಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.
ಪೆಟ್ರೋಲ್-ಡೀಸೆಲ್ ಲಭ್ಯತೆಯ ಬಗ್ಗೆ ಹೊಸ ವದಂತಿ ಹಬ್ಬಿದ ಹಿನ್ನಲೆ ಮಂಡ್ಯದಲ್ಲಿ ಜಿಲ್ಲಾಧೀಕಾರಿ ಡಾ.ಕುಮಾರ ಮಾತನಾಡಿ, ಈ ಸಂಬಂಧ ಏಜೆನ್ಸಿಗಳ ಜೊತೆ ಸಭೆ ನಡೆಸಲಾಗಿದೆ. ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇಲ್ಲ. ಬಂಕ್‌ನಲ್ಲಿ ಕ್ಯಾನ್‌ಗಳಲ್ಲಿ ಪೆಟ್ರೋಲ್ ತುಂಬಿಸುತ್ತಿರುವ ಬಗ್ಗೆ ದೂರುಗಳು ಬಂದಿದೆ. ಅಂತಹ ಪೆಟ್ರೋಲ್ ಬಂಕ್ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಕ್ಯಾನ್‌ಗಳಲ್ಲಿ ಪೆಟ್ರೋಲ್ ತುಂಬುವುದು ಸುರಕ್ಷಿತವಲ್ಲ. ಪೆಟ್ರೋಲ್ ಬಂಕ್ ಮಾಲೀಕರ ಜೊತೆ ಸಭೆ ಮಾಡಲಾಗಿದ್ದು, ಸಾರ್ವಜನಿಕರು ಆತಂಕ ಪಟ್ಟು ಪೆಟ್ರೋಲ್ ಸಿಗಲ್ಲ ಅನ್ನೋ ಕಾರಣಕ್ಕೆ ಈ ರೀತಿ ಆಗಿದೆ. ಇಂತಹ ಪ್ರಕರಣ ಕಂಡು ಬಂದರೆ ಪೆಟ್ರೋಲ್ ಬಂಕ್ ವಿರುದ್ದ ಕ್ರಮ ಜರುಗಿಸಲಾಗುತ್ತದೆ ಎಂದಿದ್ದಾರೆ.
ಇನ್ನು, ಗೃಹ ಬಳಕೆ ಗ್ಯಾಸ್ ಪೂರೈಕೆಯಲ್ಲ ಯಾವುದೇ ಸಮಸ್ಯೆ ಇಲ್ಲ. ಈ ಬಗ್ಗೆ ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇಲ್ಲ. ಆನ್ ಲೈನ್ ಸ್ವಲ್ಪ ಸಮಸ್ಯೆ ಇದೆ. ಅದನ್ನು ಸರಿಪಡಿಸಲು ಸೂಚನೆ ಕೊಟ್ಟಿದ್ದೇವೆ. ಗೃಹ ಬಳಕೆ ಸಿಲಿಂಡರ್ ಕಾಳಸಂತೆಯಲ್ಲಿ ಮಾರಾಟವಾದ್ರೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಅಮೆರಿಕದ ಹೊಸ ಕರೆನ್ಸಿ ನೋಟುಗಳ ಮೇಲೆ ರಾರಾಜಿಸಲಿದೆ ಟ್ರಂಪ್ ಸಹಿ!



















