ಕೋಲಾರ: ಇಲ್ಲಿನ DDPI ಕಚೇರಿಯಲ್ಲಿ ಶ್ರೀ ಕೃಷ್ಣ ಗೀತ ಸಾರದ ಫ್ಲೆಕ್ಸ್ ಹರಿದು ಅಪಮಾನ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕೋಲಾರದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕೋಲಾರ ಎಸ್ಪಿ ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಹೆಚ್ಚುವರಿ ಎಸ್ಪಿಗೆ ದೂರು ನೀಡಿದ್ದಾರೆ.
ಗೀತ ಸಾರದ ಫ್ಲೆಕ್ಸ್ ಹರಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ, ಪ್ರಕರಣ ದಾಖಲಿಸಿಕೊಂಡು ಗಡಿಪಾರು ಮಾಡುವಂತೆ ಒತ್ತಾಯಿಸಿದರು.
ಗೀತಾ.. ಗೀತಾ.. ಭಗವದ್ಗೀತೆ ಎಂದು ಘೋಷಣೆ ಹಾಕಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಆರೋಪಿಗಳ ವಿರುದ್ಧ ಆಕ್ರೋಶ ಹೊರ ಹಾಕಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಎಡಿಸಿಗೆ ಮನವಿ ಸಲ್ಲಿಸಿದರು.