ನಟ ಅಲ್ಲು ಅರ್ಜುನ್ ಗೆ ಬೇಲ್ ಸಿಕ್ಕಿದ್ದರೂ ರಾತ್ರಿಯಿಡೀ ಜೈಲಿನಲ್ಲೇ ಕಳೆದಿದ್ದಾರೆ.
ಹೈದರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ ನಡೆದಿದ್ದ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿತ್ತು. ಕೆಳ ಹಂತದ ಕೋರ್ಟ್ ಅವರಿಗೆ 14 ದಿನ ನ್ಯಾಯಂಗ ಬಂಧನ ವಿಧಿಸಿತ್ತು. ಆದರೆ, ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ಆದರೆ, ನಿನ್ನೆಯೇ ಕೋರ್ಟ್ ಪ್ರತಿ ಜೈಲು ಸೇರದ ಹಿನ್ನೆಲೆಯಲ್ಲಿ ಬಿಡುಗಡೆ ತಡವಾಗಿದೆ. ಹೀಗಾಗಿ ಅಲ್ಲು ರಾತ್ರಿಯಿಡೀ ಜೈಲಿನಲ್ಲೇ ಕಳೆದಿದ್ದಾರೆ. ಇಂದು ಬೆಳಗ್ಗೆ ಜೈಲಿನಿಂದ ಹೊರ ಬಂದಿದ್ದಾರೆ.
ಥಿಯೇಟರ್ ಗೆ ಅಲ್ಲು ಅರ್ಜುನ್ ಬರುತ್ತಿದ್ದಂತೆ ಅಭಿಮಾನಿಗಳು ಏಕಾಏಕಿ ಮುಗಿ ಬಿದ್ದಿದ್ದಾರೆ. ಹೀಗಾಗಿ ಕಾಲ್ತುಳಿತ ಉಂಟಾಗಿದೆ. ಆಗ ಮಹಿಳೆ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ. ಅವರ ಮಗ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಎ 11 ಆರೋಪಿಯಾಗಿ ಮಾಡಿದ್ದಾರೆ.