ಹೈದರಾಬಾದ್: ಪುಷ್ಪ 2 ಪ್ರೀಮಿಯರ್ ಶೋ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಮಹಿಳೆ ಸಾವನ್ನಪ್ಪಿರುವ ಪ್ರಕರಣ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ತೆಲಂಗಾಣ ಸಿಎಂ ಹಾಗೂ ನಟ ಅಲ್ಲು ಅರ್ಜುನ್ ಮಧ್ಯೆ ದೊಡ್ಡ ವಿವಾದವೇ ಶುರುವಾಗಿದೆ.
ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಮಾಹಿತಿ ಹರಡಲಾಗುತ್ತಿದೆ. ಆ ಮೂಲಕ ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ ಎಂದು ತೆಲಂಗಾಣ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಗ್ಗೆ ತಪ್ಪು ಮಾಹಿತಿ ಹರಡಲಾಗುತ್ತಿದೆ. ಆ ಘಟನೆ ಆಕಸ್ಮಿಕವಾಗಿ ನಡೆದಿದೆ. ಅವರ ಕುಟುಂಬಕ್ಕೆ ನನ್ನ ಸಂತಾಪ. ನಾನು ಮಗುವಿನ ಸ್ಥಿತಿಯ ಬಗ್ಗೆ ಪ್ರತಿ ಗಂಟೆಗೂ ಅಪ್‌ಡೇಟ್ ಪಡೆಯುತ್ತಿದ್ದೇನೆ. ಬಾಲಕ ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತಿದ್ದೇನೆ.
ನಾನು ಯಾರನ್ನೂ, ಯಾವುದೇ ಇಲಾಖೆ ಅಥವಾ ರಾಜಕೀಯ ನಾಯಕರನ್ನು ದೂಷಿಸಲ್ಲ. ಆದರೆ, ನನ್ನ ವಿರುದ್ಧ ಮಾಡುತ್ತಿರುವ ಆರೋಪ ಅವಮಾನಕರ ಮತ್ತು ಚಾರಿತ್ರ್ಯ ವಧೆಯಂತೆ ಭಾಸವಾಗುತ್ತಿದೆ. ದಯವಿಟ್ಟು ನನ್ನ ಬಗ್ಗೆ ಜಡ್ಜ್ ಮಾಡಬೇಡಿ. ಈ ಪ್ರಕರಣ ಇಟ್ಟುಕೊಂಡು ಸುಳ್ಳು ಮಾಹಿತಿ ಹಬ್ಬಿಸುತ್ತಿರುವುದು ತಪ್ಪು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.