ನಟ ದರ್ಶನ್ (Darshan) ಸದ್ಯ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ.
ಚಿತ್ರದರಂಗದ ಹಲವರು ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ಇದರ ಮಧ್ಯೆ ಇಂದು ನಟಿ ರಚಿತಾ ರಾಮ್ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ರಚಿತಾ ರಾಮ್ (Rachita Ram) ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಟಿ ರಚಿತಾ ರಾಮ್ ಬರೆದಿದ್ದು ಹೀಗಿದೆ….”ಈ ನೋಟ್‌ನ ನಾನು ನಟಿಯಾಗಿ ಅಲ್ಲ; ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ. ಇತ್ತೀಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು. ಮೊದಲನೆಯದಾಗಿ, ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ” ಎಂದು ಬರೆದುಕೊಂಡಿದ್ದಾರೆ.
“ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ, ನಟ ದರ್ಶನ್ ಸರ್ ನನಗೆ ಗುರು ಸಮಾನರು. ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ. ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತದೆ. ಏನಿದ್ದರೂ ಸತ್ಯ ಪೊಲೀಸ್ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೇ ನನ್ನ ನಂಬಿಕೆ.” ಇದು ರಚಿತಾ ರಾಮ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ನೋಟ್ ಆಗಿದೆ.
ಬುಲ್ ಬುಲ್’ ಸಿನಿಮಾದ ಮೂಲಕ ದರ್ಶನ್ ಗೆ ರಚಿತಾ ರಾಮ್ ನಾಯಕಿಯಾಗಿ ಚಂದನವನ ಪ್ರವೇಶಿಸಿದ್ದರು. ನಂತರ ಅಂಬರೀಶ್, ಕ್ರಾಂತಿ ಸಿನಿಮಾದಲ್ಲಿ ಕೂಡ ದರ್ಶನ್ ಗೆ ಜೋಡಿಯಾಗಿದ್ದರು.