ರೇಣುಕಾಸ್ವಾಮಿ ಹತ್ಯೆ ಪ್ರಕರಣದ ನಂತರ ನಟ ದರ್ಶನ್ ಅಷ್ಟಾಗಿ ಸಾರ್ವಜನಿಕ ವಲಯಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಇದೀಗ ನಟ ದರ್ಶನ್ ವಿದೇಶಕ್ಕೆ ಹಾರಲು ಸಜ್ಜಾಗಿದ್ದಾರೆ. ಸದ್ಯ ಕೊಲೆ ಪ್ರಕರಣದ ಆರೋಪದಡಿ ಜಾಮೀನು ಪಡೆದಿರುವ ನಟ ದರ್ಶನ್ ಡೆವಿಲ್ ಶೂಟಿಂಗ್‌ನಲ್ಲಿ ಬ್ಯುಸಿ ಇದ್ದಾರೆ.
ಈ ಹಿಂದೆ ದರ್ಶನ್ ಬೆಂಗಳೂರು ಬಿಟ್ಟು ತೆರಳುವಂತಿಲ್ಲ ಎಂದು ಕೋರ್ಟ್ ಸೂಚನೆ ನೀಡಿತ್ತು. ಈ ವಿಚಾರವಾಗಿ ನಟ ದರ್ಶನ್, ಶೂಟಿಂಗ್ ಇರುವ ಕಡೆ ತೆರಳಲು ಅನುಮತಿ ನೀಡಬೇಕೆಂದು ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ನಂತರ ದೇಶದಲ್ಲಿಯೇ ಸುತ್ತಾಟ ನಡೆಸಲು ಅವಕಾಶ ನೀಡಲಾಗಿತ್ತು. ಹೀಗಾಗಿ ರಾಜಸ್ಥಾನ ಸೇರಿದಂತೆ ಹಲವು ತೆರಳಿದ್ದರು. ಇದೀಗ ಮತ್ತೆ ಡೆವಿಲ್ ಸಿನಿಮಾದ ಶೂಟಿಂಗ್ಗಾಗಿ ಜೂನ್ 1ರಿಂದ 25ರವರೆಗೆ ದುಬೈ ಮತ್ತು ಯುರೋಪ್ಗೆ ಪ್ರಯಾಣಿಸಲು 57ನೇ ಸಿಸಿಹೆಚ್ ಕೋರ್ಟ್ನಲ್ಲಿ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್ ಪರವಾಗಿ ಅವರ ವಕೀಲ ಸುನೀಲ್ ಕುಮಾರ್ 57ನೇ ಸಿಸಿಹೆಚ್ ಕೋರ್ಟ್ನಲ್ಲಿ ಮನವಿ ಮಾಡಿದ್ದಾರೆ.



















