ಬೆಂಗಳೂರು: ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ ಎಂದು ತಿಳಿದು ಬಂದಿದೆ.
ದರ್ಶನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೈಸೂರಿನ ರ್ಯಾಡಿಸನ್ ಹೋಟೆಲ್ ನಲ್ಲಿ ಬಂಧಿಸಲಾಗಿದೆ. ಎಂಬ ಮಾಹಿತಿ ಸಿಕ್ಕಿದೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯ ಕೊಲೆ ನಡೆದಿತ್ತು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

ನಟ ದರ್ಶನ್ ಅವರನ್ನು ಮೈಸೂರಿನ ಫಾರ್ಮ್ ಹೌಸ್ ನಲ್ಲಿ ಅರೆಸ್ಟ್ ಮಾಡಿದ್ದಾರೆ ಎನ್ನಲಾಗಿದೆ. ದರ್ಶನ್ ಜೊತೆ ಪವಿತ್ರಾ ಗೌಡ ಆಪ್ತವಾಗಿದ್ದಾರೆ. ದರ್ಶನ್ ಜೊತೆ ಇರುವ ಫೋಟೋಗಳನ್ನು ಪವಿತ್ರಾ ಗೌಡ ಹಂಚಿಕೊಂಡಿದ್ದರು. ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿ ಕೊಲೆ ಆಗಿತ್ತು. ದರ್ಶನ್ ಸೂಚನೆಯಂತೆ ಕೊಲೆ ಮಾಡಿರುವಾದಿಗ ಅರೆಸ್ಟ್ ಆಗಿದ್ದ ನಾಲ್ವರು ಬಾಯಿಬಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಅರೆಸ್ಟ್ ಮಾಡಲಾಗಿದೆ ಎನ್ನಲಾಗಿದೆ.
ಅಲ್ಲದೇ, ಕೊಲೆ ನಡೆದ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಜನರನ್ನು ಬಂಧಿಸಲಾಗಿದೆ.
ಜೂನ್ 9ರಂದು ರೇಣುಕಾಸ್ವಾಮಿ ಬೆಂಗಳೂರಿಗೆ ಬಂದಿದ್ದ. ವಿನಯ್ ಎನ್ನುವವರಿಗೆ ಸೇರಿದ ಶೆಡ್ ನಲ್ಲಿ ಅವರನ್ನು ಇರಿಸಲಾಗಿತ್ತು. ಈ ಸಂದರ್ಭದಲ್ಲಿ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಲಾಗಿದೆ. 4 ಜನ ಹಲ್ಲೆ ಮಾಡಿದ ತಂಡದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಹತ್ಯೆ ಮಾಡಿ ಮೃತದೇವನ್ನು ಮೋರಿಯಲ್ಲಿ ಎಸೆದು ಹೋಗಲಾಗಿತ್ತು. ವಿಜಯನಗರ ACP ಚಂದನ್ ತಂಡದಿಂದ ಸದ್ಯ ದರ್ಶನ್ ರನ್ನು ವಶಕ್ಕೆ ಪಡೆಯಲಾಗಿದೆ.