ಬೆಂಗಳೂರು: ಕೊಲೆ ಆರೋಪಿ, ನಟ ದರ್ಶನ್ ಹಾಗೂ ಗ್ಯಾಂಗ್ ನ ಜಾಮೀನು ಪ್ರಶ್ನಿಸಿ ಪೊಲೀಸರಿಂದ ಸುಪ್ರೀಂಗೆ ಮೇಲ್ಮನವಿ ಸಲ್ಲಿಕೆಯಾಗಿದ್ದು, ಇಂದು ವಿಚಾರಣೆಗೆ ಬರುವ ಸಾಧ್ಯತೆ ಇದೆ.
ಇಂದು ಸುಪ್ರೀಂನಲ್ಲಿ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ. ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದೆ. ಜಾಮೀನು ನೀಡಿರುವುದನ್ನು ಪ್ರಶ್ನಿಸಿ, ಸುಪ್ರೀಂಕೋರ್ಟ್ ಗೆ ಪೊಲೀಸರು ಮೇಲ್ಮನವಿ ಸಲ್ಲಿಸಿದ್ದಾರೆ.
ನಟ ದರ್ಶನ್, ಪವಿತ್ರಾಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್, ಜಗದೀಶ್ ಮತ್ತು ಪ್ರದೂಷ್ ಜಾಮೀನು ಅರ್ಜಿ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದೆ. ಜ. 6ರಂದು ಸುಪ್ರೀಂ ಕೋರ್ಟ್ ನಲ್ಲಿ ಪೊಲೀಸರು ಅರ್ಜಿ ಸಲ್ಲಿಸಿದ್ದರು.