ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಮ್ಯಾನೇಜರ್ ನಾಗರಾಜ್ಗೆ ಅವಾಚ್ಯ ಶಬ್ದಗಳಿಂದ ಬೈದಿದ್ದು ನಿಜ ಎಂದು ನಟ ಧನ್ವೀರ್ ಆರ್ಆರ್ ನಗರ ಪೊಲೀಸರ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ. ಆರ್ಆರ್ ನಗರ ಠಾಣೆ ಇನ್ಸ್ಪೆಕ್ಟರ್ ಕುಮಾರಸ್ವಾಮಿ ಅವರು ಧನ್ವೀರ್ ಅವರನ್ನು ವಿಚಾರಣೆ ನಡೆಸಿದರು. ಕರೆ ಮಾಡಿ ನಾಗರಾಜ್ಗೆ ಬೈದಿದ್ದು ಸತ್ಯ, ನನ್ನದು ತಪ್ಪಾಗಿದೆ ಕ್ಷಮೆಯಿರಲಿ ಎಂದು ಧನ್ವೀರ್ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.
ವಿಜಯಲಕ್ಷ್ಮಿ ಹಾಗೂ ನಾಗರಾಜ್ ಮನೆಗೆ ಬಂದು ಗಲಾಟೆ ಮಾಡಿ, ನಮ್ಮ ತಂದೆ-ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು, ಆ ಕೋಪದಲ್ಲಿ ಬೈದಿದ್ದೇನೆ ಎಂದು ತಿಳಿಸಿದ್ದಾರೆ. ಹಣಕಾಸಿನ ವಿಚಾರಕ್ಕೆ ಗಲಾಟೆಯಾಗಿದ್ದು, ನಾನು ಲೆಕ್ಕ ಕೊಡಲು ಸಿದ್ಧನಿದ್ದೇನೆ ಆದರೆ ಅವರೇ ಬರುತ್ತಿಲ್ಲ ಎಂದು ಹೇಳಿದ್ದಾರೆ. ಇನ್ನು ನಾನು ಸಿಎಂ ಡಿಕೆಶಿ ಹಾಗೂ ಸಚಿವ ಜಮೀರ್ ಪುತ್ರ ಝೈದ್ ಖಾನ್ ಅವರ ಬಗ್ಗೆ ಮಾತನಾಡಿಲ್ಲ, ಇದೆಲ್ಲವೂ ಎಐ ಕ್ರಿಯೇಟೆಡ್ ವಿಡಿಯೊ ಆಗಿದ್ದು, ನನಗೆ ಕೆಟ್ಟ ಹೆಸರು ತರಲು ಈ ರೀತಿ ಆಡಿಯೋ ಸೃಷ್ಟಿಸಿದ್ದಾರೆ ಎಂದು ಧನ್ವೀರ್ ಸ್ಪಷ್ಟಪಡಿಸಿದ್ದಾರೆ.
\


















