ನಟ ಗೋವಿಂದ ತಮ್ಮದೇ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು, ಗಾಯಗೊಂಡಿದ್ದಾರೆ. ಆಕಸ್ಮಿಕವಾಗಿ ಫೈರ್ ಆಗಿದ್ದರಿಂದ ಅವರ ಕಾಲಿಗೆ ತೀವ್ರ ಗಾಯವಾಗಿದೆ. ಕೂಡಲೇ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅವರ ಆರೋಗ್ಯದ ಬಗ್ಗೆ ಆಸ್ಪತ್ರೆಯ ವೈದ್ಯರು ಮಾಹಿತಿ ಹಂಚಿಕೊಂಡಿದ್ದು, ನಟನಿಗೆ 8 ರಿಂದ 10 ಹೊಲಿಗೆ ಹಾಕಲಾಗಿದೆ ಎಂದು ಹೇಳಿದ್ದಾರೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ಎರಡ್ಮೂರು ದಿನಗಳಲ್ಲಿ ಆಸ್ಪತ್ರೆಗೆ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಿದ್ದಾರೆ.
ಭದ್ರತೆಗಾಗಿ ಇಟ್ಟುಕೊಂಡಿದ್ದ ರಿವೋಲ್ವಾರ್ ಆಕಸ್ಮಿಕವಾಗಿ ಫೈರ್ ಆದ ಪರಿಣಾಮದಿಂದ ಗೋವಿಂದ ಅವರಿಗೆ ಗುಂಡೇಟು ತಗುಲಿತ್ತು. ಆಪ್ತರು ಮತ್ತು ಕುಟುಂಬದವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ.
ಅವರು ಗುಣಮುಖರಾಗಿರುವ ವಿಷಯ ಕೇಳಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಅಭಿಮಾನಿಗಳು, ದೇವರು ಮತ್ತು ನನ್ನ ತಂದೆ-ತಾಯಿ ಆಶೀರ್ವಾದದಿಂದ ನಾನು ಗುಣಮುಖನಾಗುತ್ತಿದ್ದೇನೆ. ನನಗೆ ಗುಂಡೇಟು ಆಗಿತ್ತು. ಈಗ ಬುಲೆಟ್ ತೆಗೆಯಲಾಗಿದೆ. ಇಲ್ಲಿನ ವೈದ್ಯರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ನನಗಾಗಿ ಪ್ರಾರ್ಥಿಸಿದ ನಿಮ್ಮೆಲ್ಲರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ’ ಎಂದು ಗೋವಿಂದ ಅವರು ಹೇಳಿಕೆ ನೀಡಿದ್ದಾರೆ. ‘