16ನೇ ಬೆಂಗಳೂರು(bengalore) ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ನಟ ಕಿಶೋರ್(kishore) ಆಯ್ಕೆಯಾಗಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ(CM Siddaramaiah) ಟ್ವಿಟ್ ಮಾಡಿ ಶುಭಾಶಯ ತಿಳಿಸಿದ್ದಾರೆ.16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿರುವ ಖ್ಯಾತ ನಟ ಕಿಶೋರ್ ಕುಮಾರ್. ಜಿ ಅವರಿಗೆ ಅಭಿನಂದನೆಗಳು.
“ಸರ್ವ ಜನಾಂಗದ ಶಾಂತಿಯ ತೋಟ” (A garden of peace for all races) ಎಂಬ ಘೋಷವಾಕ್ಯದಡಿ ಈ ಬಾರಿಯ ಚಲನಚಿತ್ರೋತ್ಸವವನ್ನು ಆಯೋಜಿಸಲಾಗುತ್ತಿದ್ದು, ಈ ಸಾಲುಗಳಿಗೆ ಬದ್ಧವಾಗಿರುವ ಕಿಶೋರ್ ಅವರ ಮುಂದಾಳತ್ವದಲ್ಲಿ ಬೆಂಗಳೂರು ಚಲನಚಿತ್ರೋತ್ಸವ ಅತ್ಯಂತ ಯಶಸ್ವಿಯಾಗಲಿದೆ ಎಂಬ ಪೂರ್ಣ ವಿಶ್ವಾಸವಿದೆ ಎಂದು ಟ್ವಿಟ್ ಮೂಲಕ ತಿಳಿಸಿದ್ದಾರೆ.
ಮಾ.1 ರಿಂದ 8ರ ವರೆಗೆ ಸುಮಾರು 8 ದಿನಗಳ ಕಾಲ ಈ ಚಿತ್ರೋತ್ಸ ನಡೆಯಲಿದೆ. 13 ಚಿತ್ರ ಮಂದಿರಗಳಲ್ಲಿ ವಿವಿಧ ಚಿತ್ರಗಳ ಪ್ರದರ್ಶನ ನಡೆಯಲಿದೆ.