ಮೈಸೂರು: ಮಹಾ ಕುಂಭಮೇಳದಲ್ಲಿ ನಟ ಪ್ರಕಾಶ್ ರಾಜ್ (Prakash Raj) ಸ್ನಾನ ಮಾಡುತ್ತಿರುವ ಫೇಕ್ ಫೋಟೊ ವೈರಲ್ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ (Prashanth Sambargi) ವಿರುದ್ಧ ದೂರು ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ (Mysuru)ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕಾಶ್ ರಾಜ್ ದೂರು ದಾಖಲಿಸಿದ್ದು, ಎಫ್ ಐಆರ್ ದಾಖಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಕಾಶ್ ರಾಜ್, ಕುಂಭಮೇಳದ ಪುಣ್ಯ ಸ್ನಾನ ದೇಶದಲ್ಲಿ ನಡೆಯುತ್ತಿದೆ. ಹಿಂದೂ ಧರ್ಮದವರಿಗೆ ಹಾಗೂ ದೇವರನ್ನು ನಂಬುವವರಿಗೆ ಅದು ಪುಣ್ಯವಾದ ಸ್ಥಳ. ಈಗ ಎಐ ಆ್ಯಪ್ ಬಳಿಸಿ ಪ್ರಕಾಶ್ ರೈ ಕುಂಭಮೇಳದಲ್ಲಿ ಸ್ನಾನ ಮಾಡಿದ್ರಾ? ಎಂದು ಫೋಟೊ ವೈರಲ್ ಮಾಡುತ್ತಿದ್ದಾರೆ. ಇದರಲ್ಲಿ ರಾಜಕಾರಣ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ನನ್ನ ಬಗ್ಗೆ ಹಿಂದಿನಿಂದಲೂ ಸುಳ್ಳು ಸುದ್ದಿ ಹಬ್ಬಿಸುತ್ತ್ದದಾರೆ. ಇದನ್ನು ಯಾರೂ ಪ್ರಶ್ನಿಸುತ್ತಿಲ್ಲ. ಇವರೆಲ್ಲ ಸೇರಿಕೊಂಡು ಸಮಾಜದಲ್ಲಿ ದ್ವೇಷ ಹಬ್ಬಿಸುತ್ತಿದ್ದಾರೆ. ಇವರು ನಿಜವಾದ ಧರ್ಮದವರಲ್ಲ. ಜನರ ನಂಬಿಕೆಗೆ ಅಘಾತ ಮಾಡುತ್ತಿದ್ದಾರೆ. ನನ್ನ ವಿರುದ್ಧ ಸಾಕಷ್ಟು ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ.