ಹಿಂದಿ ನಟ ವಿಕಾಸ್ ಸೇಥಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ವಿಕಾಸ್ ಸೇಥಿ ಅವರಿಗೆ 48 ವರ್ಷ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಅನೇಕ ಸೆಲೆಬ್ರಿಟಿಗಳು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಗೌರಿ-ಗಣೇಶ ಹಬ್ಬದ ಸಂಭ್ರಮದಲ್ಲಿದ್ದ ಅಭಿಮಾನಿಗಳು ಈ ಸುದ್ದಿ ಕೇಳಿ ಶಾಕ್ ಆಗಿದ್ದಾರೆ. ಹಬ್ಬದ ನಡುವೆ ಸೂತಕದ ಛಾಯೆ ಆವರಿಸಿದೆ. ವಿಕಾಸ್ ಸೇಥಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.
ಅವರಿಗೆ ಹೃದಯಾಘಾತವಾಗುತ್ತಿದ್ದಂತೆ ಮುಂಬಯಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ. ಈ ವಿಷಯ ತಿಳಿದ ಅವರ ಅಭಿಮಾನಿಗಳಿಗೆ ತೀವ್ರ ನೋವಾಗಿದೆ. ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ವಿಕಾಸ್ ಸೇಥಿ ಸಕ್ರಿಯರಾಗಿದ್ದಾರೆ.
ಕ್ಯೂಂಕಿ ಸಾಸ್ ಬಿ ಕಭಿ ಬಹು ಥಿ, ಕಸೌಟಿ ಜಿಂದಗಿ ಕೆ, ಕಹಿ ತೋ ಹೋಗಾ, ಕೆ. ಸ್ಟ್ರೀಟ್ ಪಾಲಿ ಹಿಲ್, ಹಮಾರಿ ಬೇಟಿಯೋಂಕಾ ವಿವಾಹ್, ಡರ್ ಸಬ್ಕೋ ಲಗ್ತಾ ಹೈ, ಸಂಸ್ಕಾರ್ ಲಕ್ಷ್ಮಿ, ಸರುರಾಲ್ ಸಿಮರ್ ಕಾ ಸೇರಿದಂತೆ ಹಲವಾರು ಧಾರಾವಾಹಿಗಳಲ್ಲಿ ನಟಿಸಿದ್ದರು.
2021ರಲ್ಲಿ ವಿಕಾಸ್ ಸೇಥಿ ಅವರಿಗೆ ಕಾಲಿನ ಸರ್ಜರಿ ಆಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಫಿಟ್ನೆಸ್ ಬಗ್ಗೆ ಅವರು ಹಲವು ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು.