ಶಿವಮೊಗ್ಗ : ನಟ ರಾಕಿಂಗ್ ಸ್ಟಾರ್ ಯಶ್ ಅವರು ರೆಕ್ಟಲ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಭಿಮಾನಿಯ ಆರೋಗ್ಯವನ್ನು ವಿಚಾರಿಸಿದ್ದಾರೆ. ಹೌದು.. ಶಿವಮೊಗ್ಗ ಯಶ್ ಫ್ಯಾನ್ಸ್ ಅಸೋಸಿಯೇಷನ್ ಅಧ್ಯಕ್ಷ ಸುನಿಲ್ ಕುಮಾರ್ ಅನಾರೋಗ್ಯದಿಂದ ಬಳಲುತ್ತಿದ್ದು, ಅವರಿಗೆ ವೀಡಿಯೋ ಕಾಲ್ ಮಾಡಿ ಆರೋಗ್ಯ ವಿಚಾರಿಸಿ, ಯಶ್ ಧೈರ್ಯ ತುಂಬಿದ್ದಾರೆ.
ಸುನಿಲ್ ಕುಮಾರ್ ಕಳೆದ 4-5 ತಿಂಗಳಿಂದ ರೆಕ್ಟಲ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಭಗವಂತನಿಗೆ ಪ್ರಾರ್ಥಿಸೋಣ, ಧೈರ್ಯ ಕಳೆದುಕೊಳ್ಳುವುದು ಬೇಡ ಎಂದು ಯಶ್ ಮಾತನಾಡಿದ್ದಾರೆ.
ವಿಷಯ ಇವತ್ತು ಗೊತ್ತಾಯಿತು. ತಕ್ಷಣ ಮಾತಾಡುತ್ತಿದ್ದೇನೆ. ಹೋಪ್ ಕಳೆದುಕೊಳ್ಳುವುದು ಬೇಡ, ಧೈರ್ಯವಾಗಿರಿ ಎಂದು ಹಾಸಿಗೆ ಹಿಡಿದಿರುವ ಅಭಿಮಾನಿಗೆ ಯಶ್ ಧೈರ್ಯದ ಮಾತುಗಳನ್ನಾಡಿದ್ದಾರೆ.
ಟಾಕ್ಸಿಕ್ ಸಿನಿಮಾ ರಿಲೀಸ್ ಮುಂದೂಡಿಕೆ
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ರಿಲೀಸ್ ಮುಂದೂಡಿಕೆಯಾಗಿದೆ. ಭಾರೀ ನಿರೀಕ್ಷೆ ಹುಟ್ಟಿಸಿದ್ದ ಸಿನಿಮಾ ಜೂನ್ 4ಕ್ಕೆ ಚಿತ್ರಮಂದಿರಕ್ಕೆ ಬರಲಿದೆ ಎಂದು ಹೇಳಲಾಗಿತ್ತು. ಬಳಿಕ ಯಶ್ ಅವರು ಇತ್ತೀಚೆಗೆ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದು, ಸಿನಿಮಾ ರಿಲೀಸ್ ಮುಂದೂಡಲಾಗಿದೆ ಎಂದು ಬರೆದುಕೊಂಡಿದ್ದರು.
ಇದನ್ನೂ ಓದಿ : ಭಾರತದಲ್ಲಿ ಪ್ಲಂಬರ್, ಎಲೆಕ್ಟ್ರಿಷಿಯನ್ ಕೊರತೆ? ವಿದೇಶಗಳತ್ತ ಮುಖ ಮಾಡಿದ ನುರಿತ ಕಾರ್ಮಿಕರು!



















